ಯೆಶಾಯ 3:12 - ಕನ್ನಡ ಸತ್ಯವೇದವು C.L. Bible (BSI)12 ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |