Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:13 - ಕನ್ನಡ ಸತ್ಯವೇದವು C.L. Bible (BSI)

13 ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ವಾದಿಸುವದಕ್ಕೂ ಜನಗಳ ನ್ಯಾಯಾನ್ಯಾಯಗಳನ್ನು ನಿರ್ಣಯಿಸುವದಕ್ಕೂ ಎದ್ದು ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ಎದ್ದುನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ; ಅವರು ಜನರನ್ನು ನಿರ್ಣಯಿಸಲು ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:13
12 ತಿಳಿವುಗಳ ಹೋಲಿಕೆ  

“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು