Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:14 - ಕನ್ನಡ ಸತ್ಯವೇದವು C.L. Bible (BSI)

14 ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:14
34 ತಿಳಿವುಗಳ ಹೋಲಿಕೆ  

ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.


ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.


“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು