Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:15 - ಕನ್ನಡ ಸತ್ಯವೇದವು C.L. Bible (BSI)

15 ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:15
17 ತಿಳಿವುಗಳ ಹೋಲಿಕೆ  

ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II


“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?


“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


“ನೀವು ಇಟ್ಟಿಗೆಗಳ ಲೆಕ್ಕವನ್ನು ಹಿಂದೆ ಒಪ್ಪಿಸುತ್ತಿದ್ದಂತೆ ನಿನ್ನೆ ಮತ್ತು ಇಂದು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ್ದ ಇಸ್ರಯೇಲ್ ಮೇಸ್ತ್ರಿಗಳನ್ನು ಹೊಡೆಸುತ್ತಿದ್ದರು.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.


ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು