Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:16 - ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:16
16 ತಿಳಿವುಗಳ ಹೋಲಿಕೆ  

ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.


ದಿನ ಬರುವುದು, ಆಗ ಸ್ವಾಮಿ ಅವರ ಬೆಡಗಿನ ಆಭರಣಗಳೆಲ್ಲವನ್ನು ತೆಗೆದುಹಾಕುವರು. ಕಾಲಂದಿಗೆ, ತುರುಬು, ಬಲೆ, ಅರ್ಧಚಂದ್ರ,


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.


ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.


ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು