Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:24 - ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:24
28 ತಿಳಿವುಗಳ ಹೋಲಿಕೆ  

ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.


ದುಪ್ಪಟಿಗಳನ್ನು ನೇಯ್ದು ಮಾರಾಟ ಮಾಡುತ್ತಾಳೆ; ನಡುಕಟ್ಟುಗಳನ್ನು ಮಾಡಿ ವರ್ತಕರಿಗೆ ವಿಕ್ರಯಿಸುತ್ತಾಳೆ.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.


ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು