ಯೆಶಾಯ 3:5 - ಕನ್ನಡ ಸತ್ಯವೇದವು C.L. Bible (BSI)5 ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು. ಅಧ್ಯಾಯವನ್ನು ನೋಡಿ |