ಯೆಶಾಯ 3:7 - ಕನ್ನಡ ಸತ್ಯವೇದವು C.L. Bible (BSI)7 ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಣ್ಣನು ಹೂಂಕರಿಸಿ ದೇಶದ ವ್ರಣವೈದ್ಯನಾಗಿರುವದಕ್ಕೆ ನನಗಿಷ್ಟವಿಲ್ಲ, ನನ್ನ ಮನೆಯಲ್ಲಿ ಅನ್ನವೆಲ್ಲಿ, ಅಂಗಿಯೆಲ್ಲಿ? ನನ್ನನ್ನು ಜನದೊಡೆಯನನ್ನಾಗಿ ಮಾಡಬೇಡಿರಿ ಎಂದು ಹೇಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು. ಅಧ್ಯಾಯವನ್ನು ನೋಡಿ |