Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:9 - ಕನ್ನಡ ಸತ್ಯವೇದವು C.L. Bible (BSI)

9 ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:9
30 ತಿಳಿವುಗಳ ಹೋಲಿಕೆ  

ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.


ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.


ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು