Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:11 - ಕನ್ನಡ ಸತ್ಯವೇದವು C.L. Bible (BSI)

11 ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ನೀವು ಹಿಡಿದಿರುವ] ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸತ್ಯವಾಗಿ ನಡೆಯುವ ವಿಷಯಗಳನ್ನು ನೀವು ದರ್ಶನದಲ್ಲಿ ನೋಡಬೇಡಿ. ನಮ್ಮ ದಾರಿಯಿಂದ ತೊಲಗಿರಿ. ಇಸ್ರೇಲಿನ ಪರಿಶುದ್ಧನ ಬಗ್ಗೆ ನಮಗೆ ಹೇಳುವುದನ್ನು ನಿಲ್ಲಿಸಿಬಿಡಿರಿ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:11
12 ತಿಳಿವುಗಳ ಹೋಲಿಕೆ  

ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು