Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:18
69 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


“ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ಹತ್ತು ದಿನಗಳಾದ ಮೇಲೆ ಸರ್ವೇಶ್ವರನ ವಾಣಿ ಯೆರೆಮೀಯನಿಗೆ ಕೇಳಿಬಂದಿತು.


1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು