Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:2
26 ತಿಳಿವುಗಳ ಹೋಲಿಕೆ  

ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?


ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.


ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು