Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಂದಿನ ದಿವಸಗಳಲ್ಲಿ ನನ್ನ ಒಡೆಯನು ನಿಮಗೆ ದುಃಖವನ್ನೂ ಬೇನೆಯನ್ನೂ ಕೊಟ್ಟನು. ಅದು ನಿಮಗೆ ದಿನನಿತ್ಯ ತಿನ್ನುವಂಥ ರೊಟ್ಟಿಯಂತೆಯೂ ನೀರಿನಂತೆಯೂ ಇತ್ತು. ಆದರೆ ನಿಮ್ಮ ಬೋಧಕನಾದ ದೇವರು ನಿಮ್ಮಿಂದ ಎಂದಿಗೂ ಅಡಗಿಕೊಂಡಿರಲಾರನು. ನಿಮ್ಮ ಬೋಧಕನನ್ನು ನೀವು ಕಣ್ಣಾರೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:20
17 ತಿಳಿವುಗಳ ಹೋಲಿಕೆ  

ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.


‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು