ಯೆಶಾಯ 30:22 - ಕನ್ನಡ ಸತ್ಯವೇದವು C.L. Bible (BSI)22 ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.