Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:23 - ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:23
33 ತಿಳಿವುಗಳ ಹೋಲಿಕೆ  

ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ನದಿಯೊಳಗಿಂದ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಬಂದು ಜೊಂಡುಹುಲ್ಲಿನಲ್ಲಿ ಮೇಯುತ್ತಿದ್ದವು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ಆ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳಲ್ಲಿ ಭೂಮಿ ಹೇರಳವಾದ ಬೆಳೆಕೊಟ್ಟಿತು.


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


ಜನರು ಅಲ್ಲೇ ಮನೆಮಾಡಿ ನಿವಾಸಮಾಡುವರು; ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು