Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:24 - ಕನ್ನಡ ಸತ್ಯವೇದವು C.L. Bible (BSI)

24 ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊಲಗೇಯುವ ಎತ್ತುಕತ್ತೆಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:24
10 ತಿಳಿವುಗಳ ಹೋಲಿಕೆ  

ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”


ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.


ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.


ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು