ಯೆಶಾಯ 30:25 - ಕನ್ನಡ ಸತ್ಯವೇದವು C.L. Bible (BSI)25 ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬುರುಜುಗಳು ಬಿದ್ದುಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು. ಅಧ್ಯಾಯವನ್ನು ನೋಡಿ |