Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:26 - ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:26
25 ತಿಳಿವುಗಳ ಹೋಲಿಕೆ  

ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು