Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:27 - ಕನ್ನಡ ಸತ್ಯವೇದವು C.L. Bible (BSI)

27 ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:27
26 ತಿಳಿವುಗಳ ಹೋಲಿಕೆ  

ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.


ನೀವು ಸುಟ್ಟ ಸುಣ್ಣದಂತಾಗುವಿರಿ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು