Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:28 - ಕನ್ನಡ ಸತ್ಯವೇದವು C.L. Bible (BSI)

28 ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನ ಶ್ವಾಸವು ತುಂಬಿತುಳುಕಿ ಕಂಠದ ಮಟ್ಟಿಗೂ ಏರುವ ತೊರೆ; ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವದಕ್ಕೆ ಬರುತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ಕಟಬಾಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:28
34 ತಿಳಿವುಗಳ ಹೋಲಿಕೆ  

ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನಿಗಾದರೊ ಬೆನ್ನಿಗೆ ಬೆತ್ತ.


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು