Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:29 - ಕನ್ನಡ ಸತ್ಯವೇದವು C.L. Bible (BSI)

29 ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:29
27 ತಿಳಿವುಗಳ ಹೋಲಿಕೆ  

ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು