Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:30
50 ತಿಳಿವುಗಳ ಹೋಲಿಕೆ  

ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.


ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.


ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.


ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.


ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು