Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನ ಸ್ವರವನ್ನು ಕೇಳುವಾಗ ಅಶ್ಶೂರವು ನಡುಗುವದು. ಆತನು ಕೋಲಿನಿಂದ ಅಶ್ಶೂರವನ್ನು ಹೊಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರು ದಂಡದಿಂದ ದಂಡಿಸುವಾಗ, ಅಸ್ಸೀರಿಯವು ಆತನ ಧ್ವನಿಯಿಂದಲೇ ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:31
15 ತಿಳಿವುಗಳ ಹೋಲಿಕೆ  

ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು