6 ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.
6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.
6 ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
6 ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.
ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ
ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.
ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”
ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?
ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.
ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.
“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.
ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.
ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.
“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.
ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.