Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:7 - ಕನ್ನಡ ಸತ್ಯವೇದವು C.L. Bible (BSI)

7 ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:7
20 ತಿಳಿವುಗಳ ಹೋಲಿಕೆ  

ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು.


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ಕಷ್ಟಕಾಲದಲ್ಲಿ ಕಪಟಿಯನ್ನು ನಂಬುವುದು, ಮುರುಕು ಹಲ್ಲನ್ನು ಕುಂಟಕಾಲನ್ನು ನಂಬಿದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು