Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:9 - ಕನ್ನಡ ಸತ್ಯವೇದವು C.L. Bible (BSI)

9 ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:9
36 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು