Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:2 - ಕನ್ನಡ ಸತ್ಯವೇದವು C.L. Bible (BSI)

2 ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:2
37 ತಿಳಿವುಗಳ ಹೋಲಿಕೆ  

ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


“ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.


ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು