Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:3 - ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:3
25 ತಿಳಿವುಗಳ ಹೋಲಿಕೆ  

ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II


ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಬಿಲ್ಲು ಹಿಡಿದವನೂ ನಿಲ್ಲಲಾರನು. ಓಟಗಾರನೂ ಸಿಕ್ಕಿಬೀಳುವನು. ರಾಹುತನು ರಕ್ಷಣೆ ಪಡೆಯಲಾರನು.


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು