Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:5 - ಕನ್ನಡ ಸತ್ಯವೇದವು C.L. Bible (BSI)

5 ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:5
18 ತಿಳಿವುಗಳ ಹೋಲಿಕೆ  

ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.


ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು