Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:6
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು