Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:7 - ಕನ್ನಡ ಸತ್ಯವೇದವು C.L. Bible (BSI)

7 ನೀವು ಪಾಪಕಳಂಕಿತವಾದ ನಿಮ್ಮ ಕೈಯಿಂದ ನಿರ್ಮಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಎತ್ತಿ ಬಿಸಾಡುವ ದಿನ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ಆ ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:7
8 ತಿಳಿವುಗಳ ಹೋಲಿಕೆ  

ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು