Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:8 - ಕನ್ನಡ ಸತ್ಯವೇದವು C.L. Bible (BSI)

8 ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:8
21 ತಿಳಿವುಗಳ ಹೋಲಿಕೆ  

ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”


ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು