Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:11 - ಕನ್ನಡ ಸತ್ಯವೇದವು C.L. Bible (BSI)

11 ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:11
23 ತಿಳಿವುಗಳ ಹೋಲಿಕೆ  

ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.


ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು