Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:14 - ಕನ್ನಡ ಸತ್ಯವೇದವು C.L. Bible (BSI)

14 ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:14
27 ತಿಳಿವುಗಳ ಹೋಲಿಕೆ  

ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.


ನೀರ ನೀಡುವವು ಕುಡಿಯಲಿಕ್ಕೆ ಕಾಡುಮೃಗಗಳಿಗೆ I ದಾಹ ನೀಗಿಸಿಕೊಳ್ಳಲು ಆ ಕಾಡುಕತ್ತೆಗಳಿಗೆ II


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.


ಎದ್ದು ರಾತ್ರಿಯಲ್ಲೆ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ,” ಎಂದುಕೊಳ್ಳುತ್ತಿದ್ದಾರೆ.


ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”


ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.


ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು