Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:2
29 ತಿಳಿವುಗಳ ಹೋಲಿಕೆ  

ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು