Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:6 - ಕನ್ನಡ ಸತ್ಯವೇದವು C.L. Bible (BSI)

6 ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:6
33 ತಿಳಿವುಗಳ ಹೋಲಿಕೆ  

ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?


ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು