Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:1 - ಕನ್ನಡ ಸತ್ಯವೇದವು C.L. Bible (BSI)

1 ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:1
25 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು