Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:10
20 ತಿಳಿವುಗಳ ಹೋಲಿಕೆ  

ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು