Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:11 - ಕನ್ನಡ ಸತ್ಯವೇದವು C.L. Bible (BSI)

11 ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ; ನಿಮ್ಮ ಬುಸುಗುಟ್ಟುವಿಕೆಯು ನಿಮ್ಮನ್ನೇ ನುಂಗುವ ಜ್ವಾಲೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಆ ಕೆಲಸಗಳು ಒಣಹುಲ್ಲಿನಂತೆಯೂ ದಂಟಿನಂತೆಯೂ ಇವೆ. ನಿಮ್ಮ ಆತ್ಮವು ನಿಮ್ಮಲ್ಲಿ ಬೆಂಕಿಯಂತಿದ್ದು ನಿಮ್ಮನ್ನು ಸುಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಒಣಹುಲ್ಲನ್ನು ಗರ್ಭಧರಿಸಿ, ಪೈರಿನ ಮೋಟನ್ನು ಹೆರುವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:11
20 ತಿಳಿವುಗಳ ಹೋಲಿಕೆ  

ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II


ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು.


ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು