Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:14 - ಕನ್ನಡ ಸತ್ಯವೇದವು C.L. Bible (BSI)

14 ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:14
44 ತಿಳಿವುಗಳ ಹೋಲಿಕೆ  

ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.


ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು