Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:16 - ಕನ್ನಡ ಸತ್ಯವೇದವು C.L. Bible (BSI)

16 ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:16
27 ತಿಳಿವುಗಳ ಹೋಲಿಕೆ  

ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II


ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು