Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:2
35 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಶತ್ರು ವಿರುದ್ಧ ಸಹಾಯಮಾಡಯ್ಯಾ I ಮಾನವ ನೆರವು ನಮಗೆ ವ್ಯರ್ಥವಯ್ಯಾ II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ I ಕಾದಿಹೆವು ಇದೋ ನಿನ್ನ ನಂಬಿ ಭರವಸದಿ II


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು