Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:22
43 ತಿಳಿವುಗಳ ಹೋಲಿಕೆ  

ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್,


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು