Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:24 - ಕನ್ನಡ ಸತ್ಯವೇದವು C.L. Bible (BSI)

24 ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:24
19 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಅಂತೆಯೇ ಸರ್ವೇಶ್ವರ ಹಿಜ್ಕೀಯನ ಪ್ರಾರ್ಥನೆಯನ್ನು ಆಲಿಸಿದರು; ಜನರಿಗೆ ಕೇಡು ಮಾಡಲಿಲ್ಲ.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು