Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:8 - ಕನ್ನಡ ಸತ್ಯವೇದವು C.L. Bible (BSI)

8 ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಸ್ತೆಗಳು ಹಾಳಾಗಿ ಯಾರೂ ಅದರಲ್ಲಿ ನಡಿಯುವದಿಲ್ಲ. ಜನರು ತಾವು ಮಾಡಿದ ಒಪ್ಪಂದವನ್ನು ನಡಿಸುತ್ತಿಲ್ಲ. ಸಾಕ್ಷಿಗಳ ಮಾತುಗಳನ್ನು ಜನರು ಗೌರವಿಸಲು ನಿರಾಕರಿಸುತ್ತಾರೆ. ಜನರು ಒಬ್ಬರನ್ನೊಬ್ಬರು ನಂಬುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾಜ ಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತು ಹೋದರು. ಅವನು ಒಪ್ಪಂದವನ್ನು ಮೀರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರ ಮಾಡಿ, ಯಾವ ಮನುಷ್ಯನನ್ನು ಗಣನೆಗೆ ತಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:8
16 ತಿಳಿವುಗಳ ಹೋಲಿಕೆ  

ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು