ಯೆಶಾಯ 34:10 - ಕನ್ನಡ ಸತ್ಯವೇದವು C.L. Bible (BSI)10 ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. ಅಧ್ಯಾಯವನ್ನು ನೋಡಿ |