Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:17 - ಕನ್ನಡ ಸತ್ಯವೇದವು C.L. Bible (BSI)

17 ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:17
11 ತಿಳಿವುಗಳ ಹೋಲಿಕೆ  

ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು