Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:2
32 ತಿಳಿವುಗಳ ಹೋಲಿಕೆ  

ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು