Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:3 - ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಬಡಿಯುವದು; ಅವರ ರಕ್ತಪ್ರವಾಹದಿಂದ ಗುಡ್ಡಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರಲ್ಲಿ ಹತರಾದವರು, ಬೀದಿಪಾಲಾಗುವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತ ಪ್ರವಾಹದಿಂದ ಪರ್ವತಗಳು ತೋಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:3
20 ತಿಳಿವುಗಳ ಹೋಲಿಕೆ  

“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


“ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


“ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು