Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:5 - ಕನ್ನಡ ಸತ್ಯವೇದವು C.L. Bible (BSI)

5 ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನಮಾಡಿ ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯತೀರಿಸುವದಕ್ಕೆ ದುಮುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:5
32 ತಿಳಿವುಗಳ ಹೋಲಿಕೆ  

ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು